top of page

30 Sept 2024
ಚಿತ್ರದುರ್ಗ, ಸೆ. 30 : ನಗರದ ಎಸ್.ಜೆ.ಎಂ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಸ್ವಯಂ ಸೇವಕ, ಸೇವಕಿಯರು ನಗರದ ಕೇಂದ್ರ ಭಾಗದಲ್ಲಿರುವ ಶ್ರೀ ಕೃಷ್ಣರಾಜೇಂದ್ರ ನಗರ ಕೇಂದ್ರ ಗ್ರಂಥಾಲಯದ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಸ್ವಚ್ಛತಾ ಕಾರ್ಯಕ್ರಮದಲ್ಲಿ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿಗಳಾದ ಬಸವರಾಜ್ ಕೊಳ್ಳಿ, ರಾಷ್ಟ್ರೀಯ ಸೇವಾ ಕಾರ್ಯಕ್ರಮಾಧಿಕಾರಿಗಳದ ಶಿವಕುಮಾರ ಕೆ.ಹೆಚ್, ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ನಾಗರಾಜ ಜಿ.ಎಸ್., ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ರಾಜ ನಾಯ್ಕ, ವಾಣಿಜ್ಯಶಾಸ್ತ್ರ ವಿಭಾಗದ ಉಪನ್ಯಾಸಕರಾದ ಮಧು ಹಾಗೂ ರಾ.ಸೇ.ಯೋ ನಾಯಕಿಯರಾದ ಕು ರುಚಿತಾ. ಎಲ್, ಕು ಉಷಾ ಎಸ್ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
bottom of page



