
8 Aug 2025
-ಚಿತ್ರದುರ್ಗ, ಆ. 8 ನಗರದ ಬಸವೇಶ್ವರ ವೈದ್ಯಕೀಯ ಮಹಾವಿದ್ಯಾಲಯದ ಆವರಣ(ಎಸ್.ಜೆ.ಎಂ. ಕ್ಯಾಂಪಸ್)ದಲ್ಲಿ ಶುಕ್ರವಾರ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಲಿಂಗೈಕ್ಯ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳವರ ಸ್ಮರಣೋತ್ಸವದ ನಿಮಿತ್ತ ಅವರ ಹೆಸರಿನಲ್ಲಿ ಅಂದಾಜು 13 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ 126 ಕೊಠಡಿಗಳುಳ್ಳ 4 ಅಂತಸ್ತಿನ ವಿದ್ಯಾರ್ಥಿ ನಿಲಯ ಕಟ್ಟಡಕ್ಕೆ ಭೂಮಿಪೂಜೆಯನ್ನು ನೆರವೇರಿಸಲಾಯಿತು.
ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ಎಸ್.ಜೆ.ಎಂ. ವಿದ್ಯಾಪೀಠ ಆಡಳಿತ ಮಂಡಳಿಯ ಅಧ್ಯಕ್ಷರಾದ ಶಿವಯೋಗಿ ಸಿ.ಕಳಸದ ಐಎಎಸ್(ನಿ.), ಸದಸ್ಯರಾದ ಡಾ. ಪಿ.ಎಸ್. ಶಂಕರ್ ಗುದ್ದಲಿ ಪೂಜೆ ಮಾಡಿ ಚಾಲನೆ ಕಾಮಗಾರಿಗೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ ಸದಸ್ಯರಾದ ಡಾ. ಬಸವಕುಮಾರ ಮಹಾಸ್ವಾಮಿಗಳು, ಎಸ್.ಎನ್. ಚಂದ್ರಶೇಖರ್, ಶ್ರೀ ಮೋಕ್ಷಪತಿ ಮಹಾಸ್ವಾಮಿಗಳು, ಶ್ರೀ ಬಸವಮೂರ್ತಿ ಮಾದಾರಚೆನ್ನಯ್ಯ ಸ್ವಾಮಿಗಳು, ಗುರುಮಠಕಲ್‌ನ ಶ್ರೀ ಶಾಂತವೀರ ಗುರುಮುರುಘರಾಜೇಂದ್ರ ಸ್ವಾಮಿಗಳು, ಕೆಇಬಿ ಷಣ್ಮುಖಪ್ಪ, ಬಸವೇಶ್ವರ ವೈದ್ಯಕೀಯ ಮಹಾವಿದ್ಯಾಲಯದ ಡೀನ್ ಡಾ॥ ಪ್ರಶಾಂತ್, ವೈದ್ಯಕೀಯ ಅಧೀಕ್ಷಕ ಡಾ| ರಾಜೇಶ್, ನಾಗೇಂದ್ರಗೌಡ, ನಾಗರಾಜ್, ಡಾ॥ ಕೊಟ್ರೇಶ್ ಮತ್ತು ಸಿಬ್ಬಂದಿವರ್ಗದವರು ಸಂಸ್ಥೆಯ ಎಲ್ಲಾ ಶಾಲಾ ಕಾಲೇಜುಗಳ ಮುಖ್ಯಸ್ಥರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

