28 Aug 2024
ಚಳ್ಳಕೆರೆ/ಚಿತ್ರದುರ್ಗ, ಆ, 29, ಚಿತ್ರದುರ್ಗದ ಶ್ರೀಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ವತಿಯಿಂದ ಆಯೋಜಿಸಿರುವ ಅನುಭಾವ ಶ್ರಾವಣ ಕಾರ್ಯಕ್ರಮವು ತಾಲ್ಲೂಕಿನ ನಾಗಗೊಂಡನಹಳ್ಳಿ ಗ್ರಾಮದಲ್ಲಿಂದು (ಆಗಸ್ಟ್ 29) ಏರ್ಪಡಿಸಲಾಗಿದೆ.
ಬೆಳಗ್ಗೆ 10-30 ಗಂಟೆಯಿಂದ ಚಿತ್ರದುರ್ಗದ ಬಸವೇಶ್ವರ ವೈದ್ಯಕೀಯ ಆಸ್ಪತ್ರೆಯ ತಜ್ಞವೈದ್ಯರುಗಳಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ. ಮಧ್ಯಾಹ್ನ 2-30ಗಂಟೆಗೆ ಗ್ರಾಮದಲ್ಲಿ ಸಸಿ ನೆಡುವ ಕಾರ್ಯಕ್ರಮ ಇದೆ.
ನಂತರ ಸಭಾ ಕಾರ್ಯಕ್ರಮವು 3ಗಂಟೆಯಿಂದ ಚಿತ್ರದುರ್ಗದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಆಡಳಿತ ಮಂಡಳಿಯ ಸದಸ್ಯರಾದ ಡಾ.ಬಸವಕುಮಾರ ಸ್ವಾಮಿಗಳವರ ಸಾನ್ನಿಧ್ಯದಲ್ಲಿ, ಚಿಕ್ಕಮಗಳೂರು ಬಸವ ತತ್ವಪೀಠ ಹಾಗೂ ಶಿವಮೊಗ್ಗ ಬಸವ ಕೇಂದ್ರದ ಡಾ. ಮರುಳಸಿದ್ದಸ್ವಾಮೀಜಿ ಅವರ ಸಮ್ಮುಖದಲ್ಲಿ ನಡೆಯುವ ಶಿವಾನುಭವ ಗೋಷ್ಠಿಯಲ್ಲಿ "ಷಣ್ಮುಖ ಶಿವಯೋಗಿ"ಗಳವರ ವಿಷಯ ಕುರಿತಾಗಿ ಚಿತ್ರದುರ್ಗದ ಬಾಪೂಜಿ ಪ್ರಥಮ ದರ್ಜೆ ಕಾಲೇಜಿನ ಡಾ.ಜಿ.ವಿ.ರಾಜಣ್ಣ ಅವರು ಉಪನ್ಯಾಸ ನೀಡಲಿದ್ದಾರೆಂದು ಪ್ರಕಟಣೆ ತಿಳಿಸಿದೆ.