top of page

11 Apr 2025
ಚಿತ್ರದುರ್ಗ, ಏ.12. -ನಗರದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಮುರುಗಿಯ ಶಾಂತವೀರ ಮುರುಘರಾಜೇಂದ್ರ ಮಹಾಸ್ವಾಮಿಗಳವರ ಲೀಲಾವಿಶ್ರಾಂತಿ ತಾಣದ ಆವರಣದಲ್ಲಿ ಏ.12ರಂದು ಶನಿವಾರ ಬೆಳಗ್ಗೆ 8.30 ಗಂಟೆಗೆ ಶಿವಶರಣೆ ಅಕ್ಕಮಹಾದೇವಿ ಜಯಂತಿ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ವಿದ್ಯಾಪೀಠದ ಆಡಳಿತ ಮಂಡಳಿ ಅಧ್ಯಕ್ಷರಾದ ಶಿವಯೋಗಿ. ಸಿ. ಕಳಸದ್, ಐ.ಎ.ಎಸ್. (ನಿ.) ಇವರು ವಹಿಸುವರು. ಆಡಳಿತ ಮಂಡಳಿಯ ಸದಸ್ಯರಾದ ಡಾ. ಬಸವಕುಮಾರ ಮಹಾಸ್ವಾಮಿಗಳು ದಿವ್ಯಸಾನಿಧ್ಯ ವಹಿಸುವರು. ನಗರದ ವಿವಿಧ ಮಹಿಳಾಪರ ಸಂಘಟನೆಗಳ ಸಹಯೋಗದಲ್ಲಿ ಮತ್ತು ಶ್ರೀ ಜಗದ್ಗುರು ಮಲ್ಲಿಕಾರ್ಜುನ ಮುರುಘರಾಜೇಂದ್ರ ತಾಂತ್ರಿಕ ಮಹಾವಿದ್ಯಾಲಯ ಇವರ ನಿರ್ವಹಣೆಯಲ್ಲಿ ಕಾರ್ಯಕ್ರಮ ಜರುಗಲಿದ್ದು, ಸರ್ವರಿಗೂ ಸ್ವಾಗತವೆಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.
bottom of page