top of page

ಮುರುಘಾಮಠದಲ್ಲಿ 14 ಜೋಡಿ ಸಾಮೂಹಿಕ ಕಲ್ಯಾಣ

5 Apr 2025


ಚಿತ್ರದುರ್ಗ, ಏ. 5 : ಹನ್ನೆರಡನೇ ಶತಮಾನದ ವಚನಕಾರರು ಕಾಯಕ, ದಾಸೋಹಕ್ಕೆ ಪ್ರಾಧಾನ್ಯತೆ ನೀಡಿ, ಸಮ ಸಮಾಜಕ್ಕಾಗಿ ಪ್ರಯತ್ನಿಸಿದರು. ದುಡಿಯುವ ವರ್ಗದಲ್ಲಿ ಜಾತಿ ಅಸ್ಪೃಶ್ಯತೆ ಇರುವುದಿಲ್ಲ. ಪ್ರತಿಯೊಬ್ಬರು ಕಾಯಕದಲ್ಲಿ ತೊಡಗಿಸಿಕೊಳ್ಳಬೇಕು.. ಕಾಯಕದಲ್ಲಿ ಪ್ರಾಮಾಣಿಕತೆ ಇದ್ದಾಗ ಮಾತ್ರ ನೆಮ್ಮದಿಯ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯ ಎಂದು ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಆಡಳಿತ ಮಂಡಳಿ ಸದಸ್ಯರಾದ ಡಾ. ಪಿ.ಎಸ್. ಶಂಕರ್ ಹೇಳಿದರು.
ನಗರದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದಲ್ಲಿಂದು ನಡೆದ 35ನೇ ವರ್ಷದ ನಾಲ್ಕನೇ ತಿಂಗಳ ಸಾಮೂಹಿಕ ಕಲ್ಯಾಣ ಮಹೋತ್ಸಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿವಾಹಗಳು ಸರಳವಾಗಿರಬೇಕು. ಬದುಕನ್ನು ಸರಳಗೊಳಿಸಿಕೊಳ್ಳಬೇಕು. ಉತ್ತಮ ಸಂಸ್ಕಾರ, ಸಂಸ್ಕೃತಿಯನ್ನು ಬೆಳೆಸಿಕೊಂಡು ಮುಂದಿನ ಪೀಳಿಗೆಗೆ ಶ್ರೇಷ್ಠ ದಾರಿ ಮಾಡಿಕೊಡಬೇಕು. ಬಸವಾದಿ ಪ್ರಮಥರ ಆಶಯಗಳನ್ನು ಇಂದು ಈಡೇರಿಸಬೇಕಿದೆ. ಬಸವ ಪರಂಪರೆಯ ಮಠಮಾನ್ಯಗಳು ವಚನಕಾರರ ವಿಚಾರಧಾರೆಗಳನ್ನು ಸಮಾಜಕ್ಕೆ ನೀಡುತ್ತಿವೆ. ಶ್ರೀಮಠದಲ್ಲಿ 35 ವರ್ಷಗಳಿಂದ ನಿರಂತರವಾಗಿ ವಿವಾಹ ಕಾರ್ಯಕ್ರಮ ನಡೆದುಕೊಂಡು ಬರುತ್ತಿರುವುದು ಶ್ಲಾಘನೀಯ. ವ್ಯಕ್ತಿಯ ವರ್ತನೆ, ಅಂತರAಗದ ಆಲೋಚನೆಗಳು ಇತರರಿಗೆ ನೋವಾಗದಂತಿರಬೇಕು. ಮಾನವ ಕತ್ತಲೆಯಿಂದ ಬೆಳಕಿನೆಡೆಗೆ ಸಾಗಬೇಕು. ವಚನ ಸಾಹಿತ್ಯ ಇಂದಿಗೂ ಸಹ ನಮ್ಮನ್ನು ಬೆಳಕಿನೆಡೆಗೆ, ಉತ್ತಮ ಬದುಕಿನ ಕಡೆಗೆ ಕರೆದುಕೊಂಡು ಹೋಗುತ್ತಿದೆ ಎಂದರು.
ದಿವ್ಯಸಾನ್ನಿಧ್ಯ ವಹಿಸಿದ್ದ ಡಾ. ಬಸವಕುಮಾರ ಸ್ವಾಮಿಗಳು ಮಾತನಾಡಿ, ಸಾರ್ವಜನಿಕವಾಗಿ ಗುರುತಿಸಿಕೊಂಡಿರುವುದರಿAದ ಶ್ರೀಮಠವು ಜನಸಾಮಾನ್ಯರಿಗೆ ಸಾಮೂಹಿಕ ಕಲ್ಯಾಣ ಮಹೋತ್ಸವವನ್ನು ಪ್ರತಿತಿಂಗಳು ನಡೆಸುತ್ತಿದೆ. ದುಂದುವೆಚ್ಚ ಮಾಡದೆ, ಆದರ್ಶ ವಿವಾಹಕ್ಕೆ ಒಳಗಾಗಿರುವ ಇಂದಿನ ನವಜೋಡಿಗಳು ಮುಂದಿನ ಜನರಿಗೆ ದಾರಿ ದೀಪವಾಗಬೇಕು. ಶ್ರೀಮಂತರು ಅದ್ಧೂರಿಯಾಗಿ ಮದುವೆ ಮಾಡುತ್ತಾರೆ. ಇಂತಹ ದುಂದುವೆಚ್ಚಗಳಿಗೆ ಕಡಿವಾಣ ಹಾಕಬೇಕಿದೆ. ನಾವು ಇತರರಿಗೆ ಮಾದರಿಯಾಗುವಂತೆ ಬದುಕಬೇಕೆಂದರು.
ಡಾ. ಬಸವಪ್ರಭು ಸ್ವಾಮಿಗಳು ಮಾತನಾಡಿ, ಸಂಸಾರ ಎನ್ನುವುದು ಸಾಗರ ಇದ್ದ ಹಾಗೆ. ಸಂಸಾರದಲ್ಲಿ ಪ್ರೀತಿ, ನಂಬಿಕೆ, ವಿಶ್ವಾಸ ಇರಬೇಕು ಎಂದು ಹೇಳಿದರು.
ಶ್ರೀ ಬಸವನಾಗಿದೇವ ಸ್ವಾಮಿಗಳು ಮಾತನಾಡಿ, ಬಸವಣ್ಣನವರು ಮಹಾಮನೆಯಲ್ಲಿ ಎಲ್ಲರನ್ನು ನಮ್ಮವರು ಎಂದು ಭಾವಿಸುತ್ತಿದ್ದರು. ಇಂತಹ ಸಾಮೂಹಿಕ ಮಹೋತ್ಸವವು ಕೂಡ ಅದಕ್ಕೆ ಉದಾಹರಣೆಯಾಗುತ್ತದೆ. ಬದುಕಿನಲ್ಲಿ ಸಹೋದರತೆ, ಸಮಾನತೆಯಿಂದ ವರ್ತಿಸಬೇಕು. ಯಾವುದೇ ಕಾಯಕ ಕೀಳಲ್ಲ. ಈ ದೇಹ ಅಂತರAಗ ಶುದ್ಧಿ, ಬಹಿರಂಗ ಶುದ್ಧಿಯಿಂದ ಕೂಡಿರಬೇಕು. ಅಂತರAಗವನ್ನು ಒಲಿಸಿಕೊಳ್ಳಬೇಕು. ಅರಿವನ್ನು ಆಚರಣೆಗೆ ತರಬೇಕು. ತಿಂಗಳುಗಳು ಸಹ ಮನುಷ್ಯ ಹೇಗೆ ಬದುಕಬೇಕೆಂಬುದನ್ನು ತಿಳಿಸುತ್ತವೆಂದು ಕನ್ನಡ ತಿಂಗಳುಗಳ ಮಹತ್ವವನ್ನು ತಿಳಿಸಿದರು.
ಕಾರ್ಯಕ್ರಮದಲ್ಲಿ 1) ಮಧುರಂಜನ್ (ಶೆಟ್ಟಿಬಣಜಿಗ)-ಮೇಘ ಎಸ್.(ಆದಿಕರ್ನಾಟಕ), 2) ಎಂ.ಪುನೀತ (ನಾಯರ್) - ಸಿಂಚನ (ಆದಿಕರ್ನಾಟಕ) ಎರಡು ಜತೆ ಅಂತರ್ಜಾತಿ ಹಾಗೂ ಆಂಧ್ರಪ್ರದೇಶದ ಒಂದು ಜೋಡಿ ಸೇರಿದಂತೆ ಒಟ್ಟು 14 ಜೋಡಿಗಳ ವಿವಾಹವನ್ನು ನೆರವೇರಿಸಲಾಯಿತು.
ಜಮುರಾ ಕಲಾವಿದ ಉಮೇಶ್ ಪತ್ತಾರ್ ಪ್ರಾರ್ಥನೆ ಮಾಡಿದರು. ವಿಜಯದೇವರು ಸ್ವಾಗತಿಸಿದರು. ಟಿ.ಪಿ. ಜ್ಞಾನಮೂರ್ತಿ ಕಾರ್ಯಕ್ರಮ ನಿರೂಪಿಸಿದರು.

SJM Vidyapeeta is committed to transforming lives through education and is committed to providing accessible and affordable education to all.

Get in Touch

Thanks for submitting!

Registration Office

Admissions Office

© 2024 by Shakti Prasad, System Analyst, BMCH

bottom of page