top of page
10 Jul 2024
ಚಿತ್ರದುರ್ಗ / ಹೊಳಲ್ಕೆರೆ ಜು.-10 : ಚಿತ್ರದುರ್ಗ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಹಿಂದಿನ ಪೀಠಾಧಿಪತಿಗಳಾಗಿದ್ದ ಲಿಂಗೈಕ್ಯ ಜಗದ್ಗುರು ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳವರ ಸ್ಮರಣೋತ್ಸವವು ಆಗಸ್ಟ್ 8ನೇ ಗುರುವಾರ ಬೆಳಗ್ಗೆ 10.30ಗಂಟೆಗೆ ಹೊಳಲ್ಕೆರೆ ಒಂಟಿಕಂಬದ ಮುರುಘಾಮಠದ ಶ್ರೀಗಳವರ ಲೀಲಾವಿಶ್ರಾಂತಿ ಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ನಿಮಿತ್ತ ಸಮಾಲೋಚಿಸಲು ದಿನಾಂಕ 14-7-2024ನೇ ಭಾನುವಾರ ಬೆಳಗ್ಗೆ 11 ಗಂಟೆಗೆ : ಹೊಳಲ್ಕೆರೆಯ ಒಂಟಿಕಂಬದ ಮುರುಘಾಮಠದಲ್ಲಿ ಆಡಳಿತ ಮಂಡಳಿ ಅಧ್ಯಕ್ಷರಾದ ಶಿವಯೋಗಿ ಸಿ.ಕಳಸದ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಶ್ರೀಮಠದ ಭಕ್ತರು, ಅಭಿಮಾನಿಗಳು, ಸಾರ್ವಜನಿಕರು ತಪ್ಪದೇ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಿಸಲು ಸೂಕ್ತ ಸಲಹೆ, ಸಹಕಾರ ನೀಡಬೇಕೆಂದು ಶ್ರೀಮಠದ ಪ್ರಕಟಣೆಯಲ್ಲಿ ಕೋರಿದೆ.
bottom of page