top of page

ಶ್ರೀ ಮುರುಘಾಮಠದಲ್ಲಿ ಏ.28 ರಿಂದ 30ರವರೆಗೆ ಬಸವೇಶ್ವರರ ಜಯಂತಿ ಅಂಗವಾಗಿ ವಿವಿಧ ಸ್ಪರ್ಧೆಗಳ ಆಯೋಜನೆ

17 Apr 2025

ಶ್ರೀ ಮುರುಘಾಮಠದಲ್ಲಿ ಏ.28 ರಿಂದ 30ರವರೆಗೆ ಬಸವೇಶ್ವರರ ಜಯಂತಿ ಅಂಗವಾಗಿ ವಿವಿಧ ಸ್ಪರ್ಧೆಗಳ ಆಯೋಜನೆ
ಚಿತ್ರದುರ್ಗ, ಏ.16 : ಏಪ್ರಿಲ್ 28, 29 ಹಾಗೂ 30ರಂದು ನಗರದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದಲ್ಲಿ ಬಸವೇಶ್ವರರ ಜಯಂತಿ ಅಂಗವಾಗಿ ವಿಶೇಷ ಕಾರ್ಯಕ್ರಮಗಳು ಹಾಗೂ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
ಎ. 28ರಂದು ಸೋಮವಾರ ಬೆಳಗ್ಗೆ 10ಗಂಟೆಗೆ ಶ್ರೀಮಠದ ಅನುಭವ ಮಂಟಪದಲ್ಲಿ ವಚನ ಕಂಠಪಾಠ ಸ್ಪರ್ಧೆ, ಅದೇ ಸಮಯದಲ್ಲಿ ಶ್ರೀಮಠದ ಅಲ್ಲಮಪ್ರಭು ಸಂಶೋಧನಾ ಕೇಂದ್ರದಲ್ಲಿ ಬಸವಾದಿ ಶಿವಶರಣರ ವೇಷಭೂಷಣ ಸ್ಪರ್ಧೆ ಹಾಗೂ ಶ್ರೀಮಠದ ಆವರಣದಲ್ಲಿ ರಂಗೋಲಿ ಸ್ಪರ್ಧೆ (ಇದರಲ್ಲಿ ಬಸವಾದಿ ಶಿವಶರಣರ ಚಿತ್ರಗಳನ್ನೂ ಬಿಡಿಸಬಹುದಾಗಿದೆ) ನಡೆಯಲಿದೆ.
29ರಂದು ಮಂಗಳವಾರ ಬೆಳಗ್ಗೆ 10 ಗಂಟೆಗೆ ಅನುಭವ ಮಂಟಪದಲ್ಲಿ 18ವರ್ಷ ಮೇಲ್ಪಟ್ಟವರಿಗೆ ಗಂಟೆ ಕಾಲಾವಧಿಯಲ್ಲಿ "ಸರ್ವಶರಣರ ದೃಷ್ಟಿಯಲ್ಲಿ ಬಸವಣ್ಣನವರು ವಿಷಯ ಕುರಿತು ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಪಿಯುಸಿ, ಪದವಿ ಹಾಗೂ ಪದವೀಧರರಿಗೆ 7 ನಿಮಿಷಗಳ ಕಾಲಾವಧಿಯಲ್ಲಿ 'ಸಾಂಸ್ಕೃತಿಕ ನಾಯಕ ಬಸವಣ್ಣ" ವಿಷಯ ಕುರಿತಾಗಿ ಭಾಷಣ ಸ್ಪರ್ಧೆಯನ್ನು ಅಲ್ಲಮಪ್ರಭು ಸಂಶೋಧನಾ ಕೇಂದ್ರದಲ್ಲಿ ಏರ್ಪಡಿಸಲಾಗಿದೆ.
ಆಯಾ ವಿಭಾಗದಲ್ಲಿ ವಿಜೇತರಾದವರಿಗೆ ಪ್ರಥಮ ರೂ. 5000, ದ್ವಿತೀಯ ರೂ. 3000, ತೃತೀಯ ರೂ. 2000 ನಗದು ಬಹುಮಾನ ಮತ್ತು ಸ್ಪರ್ಧೆಗಳಲ್ಲಿ ಭಾಗವಹಿಸಿದ ಎಲ್ಲರಿಗೂ ಪ್ರಶಸ್ತಿ ಪತ್ರ ವಿತರಿಸಲಾಗುವುದು. ತೀರ್ಪುಗಾರರ ನಿರ್ಣಯವೇ ಅಂತಿಮವಾಗಿರುತ್ತದೆ.
ಸ್ಪರ್ಧೆಗಳಲ್ಲಿ ಭಾಗವಹಿಸುವವರು ತಮ್ಮ ಹೆಸರು ನೋಂದಾಯಿಸಿಕೊಳ್ಳಲು ದಿನಾಂಕ: 24-4-2025ರ ಗುರುವಾರ ಕಡೆ ದಿನವಾಗಿರುತ್ತದೆ. ಸ್ವ-ವಿವರವುಳ್ಳ ಮಾಹಿತಿಯನ್ನು ಈ ಕೆಳಕಂಡ 94482 95901,94499 74004. 9902929701. 97400 37176, 944864932 9886840737, ಖುದ್ದಾಗಿ ಇಲ್ಲವೆ, ಫೋನಿನಲ್ಲಿ ಮಾಹಿತಿಯನ್ನು ನೀಡಬಹುದಾಗಿದೆ ಎಂದು ಶ್ರೀಮಠದ ಪ್ರಕಟಣೆ ತಿಳಿಸಿದೆ. ಆಸಕ್ತರು ಇಂತಹ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲೂ ಸಹ ಕೋರಲಾಗಿದೆ.
ಬಸವಾಭಿಮಾನಿಗಳು, ಶ್ರೀಮಠದ ಭಕ್ತರು, ಬಸವ ಸಂಘಟನೆಗಳು, ಬಸವಕೇಂದ್ರಗಳು ಹಾಗೂ ಸರ್ವ ಸಮಾಜಗಳ ಸಹಯೋಗದಲ್ಲಿ ಮೂರು ದಿನಗಳ ಕಾಲ ಅರ್ಥಪೂರ್ಣ ಕಾರ್ಯಕ್ರಮ ಆಯೋಜಿಸಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕಾಗಿ ವಿನಂತಿಸಲಾಗಿದೆ.

SJM Vidyapeeta is committed to transforming lives through education and is committed to providing accessible and affordable education to all.

Get in Touch

Thanks for submitting!

Registration Office

Admissions Office

© 2024 by Shakti Prasad, System Analyst, BMCH

bottom of page